ಬೆಂಗಳೂರು : ಬೆಂಗಳೂರಿನಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಕಾಮುಕ ಯೋಗಗುರು ನಿರಂಜನಾ ಮೂರ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ಸೆಂಟರ್ ನೆಡೆಸುತ್ತಿದ್ದ ನಿರಂಜನಾ ಮೂರ್ತಿ ಎಂಬಾತ ಯೋಗ ಕ್ಲಾಸ್ ಗೆ ಸೇರಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಆರೋಪಿ ನಿರಂಜನ ಮೂರ್ತಿ 7-8 ಮಹಿಳೆಯರ ಮೇಲೂ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಯುವತಿಯರ ಮೇಲೂ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ.
ಬಾಲಕಿ ಓರ್ವಳ ದೂರಿನ ಅನ್ವಯ ಅರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ರಾಜರಾಜೇಶ್ವರಿ ಪೊಲೀಸರಿಂದ ವಿಚಾರಣೆ ಮುಂದುವರೆದಿದೆ.