ಉತ್ತರಕನ್ನಡ : ಉದಯ ಕನ್ನಡದಲ್ಲಿ ಮಧ್ಯಾಹ್ನದ ಬಿಸಿ ಊಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸರ್ಕಾರಿ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಅಸ್ವಸ್ಥಗೊಂಡ ಮಕ್ಕಳನ್ನು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ 400 ಮಕ್ಕಳು ಸರ್ಕಾರಿ ಮಾದರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಮಕ್ಕಳು ಸೇವಿಸಿದ ಬಿಸಿ ಊಟದಲ್ಲಿ ಇಲಿಯ ಹಿಕ್ಕೆ ಪತ್ತೆಯಾಗಿತ್ತು ಬಿಸಿಊಟ ಸೇವಿಸಿದ ನಂತರ ಹಲವು ಮಕ್ಕಳಿಗೆ ವಾಂತಿ ಭೇಧಿ ಕಾಣಿಸಿಕೊಂಡಿದೆ ಈ ವೇಳೆ ತಾಲೂಕು ವೈದ್ಯಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು ಮುಂಡಗೋಡು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








