ಬೆಂಗಳೂರು: ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಗೆ ಸಿಸಿಬಿ ಪೊಲೀಸರು ಜೂನ್ 1 ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ನೋಟಿಸ್ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್.ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಭಾಗಿಯಾಗಿದ್ದರು. ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ 103 ಜನರು ಸಿಕ್ಕಿಬಿದ್ದಿದ್ದರು. ಬಳಿಕ ರಕ್ತದ ಮಾದರಿಯಲ್ಲಿ ನಟಿ ಹೇಮಾ ಸೇರಿದಂತೆ ಹಲವು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು 2 ನೇ ನೋಟಿಸ್ ನೀಡಿದ್ದು, ಜೂನ್ 1 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.