ಬೆಂಗಳೂರು : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೊಸಲೆನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ನಿಖಿಲ್ ಸೊಸಲೆ ಬಂಧನಕ್ಕೆ ಕಾರಣ ಬಹಿರಂಗವಾಗಿದ್ದು, ಪೊಲೀಸರು ನಿರಾಕರಿಸಿದ್ದರೂ ಬೆಂಗಳೂರಿನಲ್ಲಿ ಆರ್ ಸಿಬಿ ವಿಕ್ಟರಿ ಪರೇಡ್ ಅಂತ ಪೋಸ್ಟ್ ಹಾಕಿದ್ದರು. ಪೊಲೀಸರ ಅನುಮತಿ ಪಡೆಯದೇ ನಿಖಲ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಂಧಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ , ಕಿರಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ.