ಬೆಂಗಳೂರು: ಐಪಿಎಲ್ 2026ರ ನಿರ್ಣಾಯಕ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಸ್ಪೋಟಕ ಓಪನರ್ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ.
ಕಳೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಗೈರಾಗಿದ್ದ ಫಿಲ್ ಸಾಲ್ಟ್, ಇನ್ನೂ ಚೇತರಿಸಿಕೊಳ್ಳದ ಕಾರಣ ನಾಳೆ (ಏಪ್ರಿಲ್ 27) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕೂ ಲಭ್ಯವಿರುವುದಿಲ್ಲ ಎಂದು ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.
ನೆಟ್ ಪ್ರಾಕ್ಟೀಸ್ ವೇಳೆ ಫಿಲ್ ಸಾಲ್ಟ್ ಗಾಯಗೊಂಡಿದ್ದರು. ಅವರ ಗೈರು ತಂಡದ ಪವರ್-ಪ್ಲೇ ಬ್ಯಾಟಿಂಗ್ ಮೇಲೆ ಪ್ರಭಾವ ಬೀರಲಿದೆ.ಸಾಲ್ಟ್ ಬದಲಿಗೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಂಗ್ಲೆಂಡ್‌ನ ಜೇಕಬ್ ಬೆಥೆಲ್ ಅವರೇ ವಿರಾಟ್ ಕೊಹ್ಲಿ ಜೊತೆ ಮತ್ತೊಮ್ಮೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
“ಸಾಲ್ಟ್ ಸದ್ಯಕ್ಕೆ ಗಾಯಾಳುವಾಗಿದ್ದಾರೆ, ಅವರು ಸಂಪೂರ್ಣ ಗುಣಮುಖರಾಗುವವರೆಗೂ ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ,” ಎಂದು ಕಾರ್ತಿಕ್ ತಿಳಿಸಿದ್ದಾರೆ.








