ಬೆಂಗಳೂರು : ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯುವಾಗ ಯಾವ ರೀತಿ ಹೈ ವೋಲ್ಟೇಜ್ ಇರುತ್ತದೆಯೋ ಅದೇ ರೀತಿ ಐಪಿಎಲ್ ಅಂತ ಬಂದಾಗ ಆರ್ಸಿಬಿ ಮತ್ತು ಸಿಎಸ್‌ಕೆ ಪಂದ್ಯ ಕೂಡ ಅಷ್ಟೆ ಹೈ ವೋಲ್ಟೇಜ್ ಇಂದ ಕೂಡಿರುತ್ತೆ. ಆರ್ಸಿಬಿ ಅಭಿಮಾನಿಗಳಾಗಲಿ ಅಥವಾ ಸಿಎಸ್‌ಕೆ ಅಭಿಮಾನಿಗಳಾಗಲಿ ಟಿಕೆಟ್ ಬೆಲೆ ಕುರಿತು ಯೋಚಿಸುವುದೇ ಇಲ್ಲ. ದುಪ್ಪಟ್ಟು ಬೆಲೆಯಾದರೂ ಯೋಚಿಸದೇ ಟಿಕೆಟ್ ಖರೀದಿಸುತ್ತಾರೆ. ಇದೀಗ ಇದನ್ನೇ ಬಂಡವಾಳ ಮಾಡಿಕೊಂಡು ಬ್ಲಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ಟಿಕೆಟ್‌ನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 32 ಟಿಕೆಟ್‌ಗಳು ಹಾಗೂ 1 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿಂತು 1,200 ರೂ. ಬೆಲೆಯ ಟಿಕೆಟ್ ಅನ್ನು 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಸಿಸಿಬಿ ವಿಶೇಷ ತಂಡ ಟಿಕೆಟ್ ಖರೀದಿಸುವ ನೆಪದಲ್ಲಿ ಬಂದು ದಂಧೆಕೋರರನ್ನ ಬಂಧಿಸಿದ್ದಾರೆ. ಅಲ್ಲದೆ ಅವರ ಬಳಿದ ಇನ್ನು 32 ಟಿಕೆಟ್ ಹಾಗೂ ಒಂದು ಲಕ್ಷ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಟಾಸ್ ಆಗಿದ್ದು, ಸಿಎಸ್‌ಕೆ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.