ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅವಧಿಗೂ ಮುನ್ನವೇ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದು ಈ ನೆಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋಷಣೆ ಮಾಡಿದೆ ಹಾಗಾಗಿ ನಾಳೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಜೆ ಘೋಷಿಸಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.