ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಸ್ಟಾರ್ ರೀಲ್ಸ್ ರಾಣಿಯಂದೇ ಕರೆಸಿಕೊಳ್ಳುವ ಸೋನು ಗೌಡಗೆ ಇದೀಗ ಬೆಂಗಳೂರಿನ ಸಿಜೆಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇತ್ತೀಚಿಗೆ ರಾಯಚೂರು ಜಿಲ್ಲೆಯ ಒಂದು ಮಗುವನ್ನು ಕಾನೂನು ಬಾಹಿರವಾಗಿ ಸೋನು ಶ್ರೀನಿವಾಸಗೌಡ ದತ್ತು ದತ್ತು ಪಡೆದುಕೊಂಡಿದ್ದರು. ಇದೀಗ ಸೋನು ಶ್ರೀನಿವಾಸ ಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಸಿಜೆಮ್ ಕೋರ್ಟಿನ ನ್ಯಾಯಾಧೀಶರು ಇದಿ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ?
ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ ಆಗಿದ್ದಾರೆ. ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದೇ ಅವರ ಬಂಧನಕ್ಕೆ ಕಾರಣ. ಅಷ್ಟೇ ಅಲ್ಲ, ಹಲವು ನಿಯಮಗಳನ್ನು ಸೋನು ಶ್ರೀನಿವಾಸ ಗೌಡ ಗಾಳಿಗೆ ತೂರಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.
ಅಪ್ರಾಪ್ತ ಬಾಲಕಿಯನ್ನು ಆಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಸೋಷಿಯಲ್ ಮೀಡಿಯಾ ತಾರೆ ಸೋನು ಗೌಡ ಬಂಧನಕ್ಕೆ ಒಳಗಾಗಿದ್ದು, ನಿನ್ನೆ ಅವರನ್ನು ರಾಯಚೂರಿಗೆ ಕರೆದೊಯ್ದು ಸ್ಥಳ ಮಹಜರು ಮಾಡಲಾಗಿದೆ. ರಾಯಚೂರಿನ ಬಾಲಕಿಯೊಬ್ಬರನ್ನು ದತ್ತು ಪಡೆದುಕೊಂಡಿರುವುದಾಗಿ ಸೋನು ಗೌಡ ವಿಡಿಯೋ ಹರಿಬಿಟ್ಟಿದ್ದರು. ಆದರೆ ಸೋನು ಗೌಡ ನಿಯಮ ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದಾರೆಂದು ಆರೋಪಿಸಿ ಜಿಲ್ಲಾ ಮಕ್ಕಳು ಹಕ್ಕು ರಕ್ಷಣಾ ಘಟಕದ ಅಧಿಕಾರಿ ದೂರು ನೀಡಿದ್ದರು. ದೂರಿನ ಅನ್ವಯ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡರನ್ನು ಬಂಧಿಸಿದ್ದರು.
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದ ಸೋನು ಗೌಡ, ಬಾಲಕಿಯೊಬ್ಬಾಕೆಯನ್ನು ದತ್ತು ಪಡೆದುಕೊಂಡಿರುವುದಾಗಿ ಹೇಳಿದ್ದರು. ಆ ಬಾಲಕಿ ತಾನಿಲ್ಲದೆ ಇರುವುದಿಲ್ಲವೆಂದು, ದತ್ತು ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಪೂರ್ಣವಾಗುತ್ತದೆ ಎಂದು ಹೇಳಿದ್ದರು. ಬಾಲಕಿಯಿಂದ ಬಂದ ಹಣವನ್ನು ಪೋಷಕರಿಗೆ ನೀಡುತ್ತೇನೆ ಎಂದು ಸಹ ಸೋನು ಗೌಡ ವಿಡಿಯೋನಲ್ಲಿ ಹೇಳಿದ್ದರು. ಸೋನು ಗೌಡ, ನಿಯಮದ ಅನ್ವಯ ಮಗುವನ್ನು ದತ್ತು ಪಡೆದಿಲ್ಲ ಎಂಬುದು ಅವರ ಮಾತುಗಳಿಂದ ಖಾತ್ರಿಯಾಗುತ್ತಿತ್ತು. ವಿಡಿಯೋ ಆಧಾರದ ಮೇಲೆ ಜಿಲ್ಲಾ ಮಕ್ಕಳು ಹಕ್ಕು ರಕ್ಷಣಾ ಘಟಕದ ಅಧಿಕಾರಿ ಸೋನು ಗೌಡ ವಿರುದ್ಧ ದೂರು ದಾಖಲಿಸಿದ್ದರು, ದೂರು ದಾಖಲಿಸಿಕೊಂಡಿದ್ದ ಪೊಲೀಸರು ಸೋನು ಗೌಡರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.