ಬೆಂಗಳೂರು : ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸರ್ಕಾರವು ರಾಜ್ಯಪಾಲರಿಗೆ ಮರುಸಲ್ಲಿಸಿದೆ. ಮೊದಲ ಬಾರಿಗೆ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಮಸೂದೆಯನ್ನು ಅನುಮೋದಿಸಿರಲಿಲ್ಲ. ಈಗ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಲಾಗಿದೆ.
ಹೌದು ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಸೂದೆಯನ್ನು ಮರು ಸಲ್ಲಿಕೆ ಮಾಡಲಾಗಿದೆ.
ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು ವಿರೋಧಿಸಿ ಎರಡೂ ಪಕ್ಷಗಳು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದವು.