ಬೆಂಗಳೂರು : ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ನಟ ಮತ್ತು ಚಿಂತಕ ಪ್ರಕಾಶ್ ಬಳವಾಡಿ ಅವರು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪರವಾಗಿ ಬಿಜೆಪಿ ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ವಾದ ಮಂಡಿಸಿದರು.
ತಾಂತ್ರಿಕ ವಿಶ್ಲೇಷಣೆ ಮತ್ತು ಪರಿಸರ ಪರಿಣಾಮ ಅಧ್ಯಯನ ನಡೆಸದೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಲಾಲ್ಬಾಗ್ನಲ್ಲಿ 6.5 ಎಕರೆ ಭೂಮಿ ಸ್ವಾಧೀನಕ್ಕೆ ಉದ್ದೇಶಿಸಲಾಗಿದೆ. ನೈಸರ್ಗಿಕವಾಗಿ ರಚನೆ ಆಗಿರುವ ಬಂಡೆಗೆ ಹಾನಿಯಾಗುವ ಸಾಧ್ಯತೆ ಇದೆ. ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೆ ಯೋಜನೆ ರೂಪಿಸಲಾಗಿದೆ. ಹೀಗಾಗಿ ಟೆಂಡರ್ ಅಧಿಪೂಚನೆಗೆ ತಡೆ ನೀಡುವಂತೆ ಮನವಿ ಮಾಡಿದರು. ಲಾಲ್ಬಾಗ್ನಲ್ಲಿ ಮರ ಕಡಿಯುವ ಪ್ರಸ್ತಾವನೆ ಇದೆಯಾ ಎಂದು ಹೈಕೋರ್ಟ್ ಪ್ರಶಿಸಿತು. ಈ ವೇಳೆ ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ್ದಾರೆ.








