ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಂದು ಸಂಪುಟದಲ್ಲಿ ತೀರ್ಮಾನ ಆಗಿದೆ. ರಾಮನಗರವೆ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು.
ಇಂದು ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಎಂದು ವಿಧಾನ ಸೌಧದಲ್ಲಿ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.