ಮೈಸೂರು : ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೈಸೂರಿನ ಅಪಾರ್ಟ್ ಮೆಂಟ್ ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ಅವರ ಶವ ಪತ್ತೆಯಾಗಿದೆ.
ಮೈಸೂರಿನ ಆರ್‌ಟಿಓ ವೃತ್ತದ ಸಮೀಪ ಇರುವ ಡೆನ್ಮಾರ್ ಅಪಾರ್ಟ್ಮೆಂಟ್ ನಲ್ಲಿ ವೈದ್ಯ ಶವ ಪತ್ತೆಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.