ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟರ್ಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ಕಾಣೆಯ ಪೊಲೀಸರು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಬಂದಿತ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಇದಕ್ಕೂ ಮೊದಲು ನಟ ದರ್ಶನ್ ಮತ್ತು ಗ್ಯಾಂಗ್ ನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಾಯಿತು. ನಂತರ ಪರಿಕತ್ ಭಾಷಣ ನಂತರ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಈ ಹಿಂದೆ ಕೋರ್ಟ್ ಆದೇಶ ಹೊರಡಿಸಿತು.ಇದೀಗ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ.ಇನ್ನೇನು ಕೆಲವೇ ಕ್ಷಣಗಳಲ್ಲಿ ನಟ ದರ್ಶನ್ ಗೆ ಜೈಲ ಅಥವಾ ಬೇಲಾ ಎಂಬುದರ ಕುರಿತು ತೀರ್ಪು ಹೊರ ಬೀಳಲಿದೆ .