ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ವಿಚಾರಣೆ ನಡೆಯಿತು. ಪ್ರಕರಣದ A2 ಆರೋಪಿ ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.
ವಿಚಾರಣೆಯ ವೇಳೆ ಆರೋಪಿ ದರ್ಶನಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸೌಲತ್ತನ್ನು ಸಹ ನೀಡುತ್ತಿಲ್ಲ. ಇದೆ ವೇಳೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, 57ನೇ ಸಿಸಿಎಚ್ ಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ದರ್ಶನ್ ಪ್ರಕರಣದ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ವರದಿ ಕೇಳಿದೆ ಇಲ್ಲಿಯವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಎಷ್ಟು ಸಾಕ್ಷಿಗಳ ವಿಚಾರಣೆ ಬಾಗಿ ಇದೆ? ವಿವರ ನೀಡಿ. ಸಾಕ್ಷಿ ವಿಚಾರಣೆ ಮುಗಿಯಲು ಎಷ್ಟು ಸಮಯ ಬೇಕು ಎಂದು ವರದಿ ನೀಡಿ. ಜೈಲಿನಲ್ಲಿ ದರ್ಶನ್ಗೆ ಮೂಲಸೌಕರ್ಯ ಒದಗಿಸಲಾಗಿದೆಯೆ ಅಥವಾ ಇಲ್ಲವೇ? ಎಂದು ಒಂದು ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಪ್ರಕರಣ ಹಿನ್ನೆಲೆ?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2025ರ ಆಗಸ್ಟ್ 14ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಕಳೆದ ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿರಲಿಲ್ಲ. ಹಾಗಾಗಿ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಹೊಸ ರಿಟ್ ಅರ್ಜಿ ಸಲ್ಲಿಸಿದ್ದು, ಜಾಮೀನಿಗೆ ಮನವಿ ಮಾಡಿದ್ದಾರೆ.
ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿಲ್ಲ. 273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷಗಳೇ ಬೇಕಾಗುತ್ತದೆ. ಹೀಗಾಗಿ, ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಇದೀಗ ವಿಚಾರಣೆ ಮುಗಿದಿದ್ದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಇದುವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ ಎಂದು ಒಂದು ವಾರದಲ್ಲಿ ವರದಿ ನೀಡಿ ಎಂದು ನೋಟಿಸ್ ಜಾರಿ ಮಾಡಿದೆ.








