ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಮೀನು ರದ್ದು ಮಾಡಿತ್ತು. ಇದೀಗ ಮರು ಪರಿಶೀಲನೆ ಕೋರಿ ಪವಿತ್ರ ಗೌಡ ಮತ್ತೊಂದು ಅರ್ಜಿ ಸಲ್ಲಿಸಿದ್ದು ಜಾಮೀನು ಮಂಜೂರು ಮಾಡುವಂತೆ ಕೋರಿ ಪವಿತ್ರ ಗೌಡ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 6 ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇನ್ನು ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಪುನರ್ ಪರಿಶೀಲನ ಅರ್ಜಿ ಪ್ರತಿಯನ್ನು ನಮಗೆ ನೀಡಿಲ್ಲ ಎಂದು ದೆಹಲಿಯಲ್ಲಿ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ.
		







