ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಪ್ರದೋಶ್ ಅಜ್ಜಿ ಇಂದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ನಿವಾಸದಲ್ಲಿ ಪ್ರದೋಶ್ರ ಅಜ್ಜಿ ನಿಧನರಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ 14ನೇ ಆರೋಪಿ ಆಗಿದ್ದಾರೆ. ಸದ್ಯ ಅಜ್ಜಿ ನಿಧನವಾಗಿರುವ ಹಿನ್ನೆಲೆಯಲಿ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲು ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್ ರೇಣುಕಾ ಸ್ವಾಮಿ ಕೊಲೆ ನಡೆದ ದಿನ ಪ್ರದೋಶ್ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ನಲ್ಲಿ ಹಾಜರಿದ್ದರು ಎನ್ನಲಾಗಿದ್ದು, ಕೊಲೆ ನಡೆದ ಬಳಿಕ ಪ್ರಕರಣ ಮುಚ್ಚಿ ಹಾಕಲು ಪ್ಲಾನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.