ಬೆಂಗಳೂರು : ಚಿತ್ರುದರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಇಂದು A1ಆರೋಪಿ ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಬೆಂಗಳೂರಿನ ಆರ್.ಆರ್.‌ ನಗರದಲ್ಲಿ ಪವಿತ್ರಾಗೌಡ ಮನೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿ ಪವಿತ್ರಾಗೌಡ ಹಾಗೂ ಪವನ್‌ ಇಬ್ಬರನ್ನೂ ಆರ್.‌ ಆರ್.‌ ನಗರದ ಮನೆಗೆ ಕರೆದುಕೊಂಡು ಹೋಗಿ ಸ್ಥಳ ಮಹಜನರು ನಡೆಸಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಪವನ್‌ ಪವಿತ್ರಾಗೌಡ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಹೀಗಾಗಿ ಆತನನ್ನೂ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದೆ.

Share.
Exit mobile version