ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಇಂದು ನ್ಯಾಯಾಲಯದೆದುರು ಹಾಜರಾಗಿದ್ದಾರೆ.
ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಗೆ ನಟ ದರ್ಶನ್ ಹಾಜರಾಗಿದ್ದಾರೆ.