ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆ ಊಟ, ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಹೈಕೋರ್ಟ್ ಬಳಿಕ ಇದೀಗ ಮ್ಯಾಜಿಸ್ಟ್ರೀಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ನಿನ್ನೆ ಮ್ಯಾಜಿಸ್ಟ್ರೀಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಮ್ಯಾಜಿಸ್ಟ್ರೀಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ನ್ಯಾ.ಎಸ್ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಜುಲೈ ೨೬ ಕ್ಕೆ ಮುಂದೂಡಿದೆ.