ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸಿನಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಇದೀಗ ಹೆಚ್ಚುವರಿ 7 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದ್ದು ಹೀಗಾಗಿ ನಟ ದರ್ಶನ್ ಇರುವ ಸೆಲ್ ಗೆ ಭಾರಿ ಬಿಗಿ ಭದ್ರತೆ ನಿಯೋಜಿಸಲಾಗಿದೆ.
ಹೌದು ಹೊರಗಿನಿಂದ ನಟ ದರ್ಶನ್ ಅವರನ್ನು ಯಾರೇ ಭೇಟಿ ಮಾಡಲು ಬಂದರೂ ಸಹ ಈ 7 ಸಿಬ್ಬಂದಿಗಳು ಅವರ ಜೊತೆಯಲ್ಲಿ ಇರುತ್ತಾರೆ.ಈ ಹಿಂದೆ ಸಿದ್ದಾರೂಡ ಎಂಬ ಕೈದಿ ಜೈಲಿನಿಂದ ಹೊರಗಡೆ ಬಂದ ಬಳಿಕ ತಾನು ಕೂಡ ದರ್ಶನ್ ಅವರನ್ನು ಭೇಟಿ ಮಾಡಿದ್ದೆ ಎಂದು ಹೇಳಿದ್ದನು. ಆದ್ದರಿಂದ ಇಂತಹ ಘಟನೆ ಮರುಕಳಿಸದಂತೆ ಹೆಚ್ಚುವರಿ ಭದ್ರತೆ ನೀಡಲಾಗಿದೆ.
ದರ್ಶನ್ ಗೆ ಜೈಲೂಟವೇ ಗತಿ
ಇನ್ನೂ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೀಡುವಂತಹ ಆಹಾರ ಜೀರ್ಣವಾಗುತ್ತಿಲ್ಲ ಹೀಗಾಗಿ ಅವರು ಮನೆ ಊಟ, ಬಟ್ಟೆ ಸೇರಿದಂತೆ ಇತರೆ ವಸ್ತುಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ಅಜೀರ್ಣ, ಅತಿಸಾರವಾಗುತ್ತಿದೆ. ಹೀಗಾಗಿ ಮನೆಯೂಟ ನೀಡಲು ಅವಕಾಶ ಕೊಡಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಆದರೆ ನಿನ್ನೆ ದರ್ಶನ್ ಪರ ವಕೀಲ ಅರುಣ್ ಅವರು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ ತಾಂತ್ರಿಕ ಕಾರಣ ಮನೆ ಊಟಕ್ಕಾಗಿ ಸಲ್ಲಿಸಿದ ಅರ್ಜೆಯನ್ನು ಹಿಂಪಡೆದಿದ್ದಾರೆ. ಹಾಗಾಗಿ ನಟ ದರ್ಶನ್ ಅವರಿಗೆ ಇನ್ನೂ ಕೆಲವು ದಿನಗಳ ಕಾಲ ಜೈಲುಟವೇ ಗತಿಯಾಗಿದೆ.