ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ 57ನೇ ಸಿ ಸಿ ಹೆಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ತಮ್ಮ ಪರ ವಕೀಲರ ಮೂಲಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ನಿನ್ನೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು ಹಾಗೂ ಪೊಲೀಸರ ಎಸ್ ಪಿ ಪಿ ಪರ ವಕೀಲರ ವಾದ ಮತ್ತು ಪ್ರತಿ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯವು ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಈ ಹಿನ್ನೆಲೆಯಲ್ಲಿ ನಿನ್ನೇನೆ ನಡೆದ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿತ್ತು. ಅದರಂತೆ ಇಂದು ನಟ ದರ್ಶನ್ ಪರ ವಕೀಲ ಸುನಿಲ್ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.
ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.