ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಇಂದು ಜಾಮೀನಿನ ನಿರೀಕ್ಷೆಯಲ್ಲಿದ್ದಂತ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ 11 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್ ಮುಂದೆ ಎಸ್ ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು.
ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಹೀಗಾಗಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿಕೆ ಮಾಡಿದೆ.