ಬೆಂಗಳೂರು : ದರ್ಶನ್ ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇನ್ ಕ್ಯಾಮರಾ ಪ್ರಕ್ರಿಯೆ ನಡೆಸಲು ಕೋರ್ಟ್ ತೀರ್ಮಾನ
ಮುಚ್ಚಿದ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ. ಸಂಬಂಧಪಟ್ಟ ವಕೀಲರು, ಆರೋಪಿಗಳನ್ನು ಬಿಟ್ಟು ಉಳಿದವರು ಹೊರಗೆ ಇರಲಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಕಾಶಿನಾಥಯ್ಯ ಹಾಗೂ ತಾಯಿ ರತ್ನಪ್ರಭಾ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ.








