ಬೆಂಗಳೂರು: ಚಿತ್ರುದರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.