ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಧ್ಯಾಹ್ನ 2.45 ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ನ್ಯಾಯಾಲಯಕ್ಕೆ ನಟ ದರ್ಶನ್ ಪರ ವಕೀಲರು ತಮ್ಮ ಕಕ್ಷಿದಾರರ ಪರವಾಗಿ ವಾದಿಸಲು ಹೆಚ್ಚಿನ ಕಾಲಾವಕಾಶ ಕೋರಿದರು. ಈ ಕಾರಣದಿಂದ ವಿಚಾರಣೆಯನ್ನು ಮಧ್ಯಾಹ್ನ 2.45 ಕ್ಕೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಈವರೆಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಒರ್ವ ಆರೋಪಿಗೆ ಮಾತ್ರವೇ ಜಾಮೀನು ದೊರೆತಿದೆ. ಇನ್ನುಳಿದ ಆರೋಪಿಗಳು ಜೈಲಲ್ಲೇ ಇದ್ದಾರೆ. ಯಾರಿಗೂ ಜಾಮೀನು ದೊರೆತಿಲ್ಲ. ಇಂದು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮಧ್ಯಾಹ್ನ 2.45 ಕ್ಕೆ ಮುಂದೂಡಿಕೆ ಮಾಡಿದೆ.