ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಕರಣದ A1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಹೆಚ್ 55 ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಳೆದ ಎರಡು ತಿಂಗಳಿನಿಂದ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರ ಗೌಡ ಅವರು ಇತ್ತೀಚೆಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಆಗಸ್ಟ್ 27ಕ್ಕೆ ಅರ್ಜಿ ವಿಚಾರಣೆ ಮಂದೂಡಿ ನ್ಯಾಯಾಧೀಶ ಜೈ ಶಂಕರ್ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಎಸ್ ಪಿ ಪಿ ಪವಿತ್ರ ಗೌಡ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಜಾಮೀನು ನೀಡಿದಂತೆ ಎಸ್ ಟಿ ಪಿ ಆಕ್ಷೇಪಣೆ ಸಲ್ಲಿಸಿದೆ.