ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ 6 ಎಫ್ ಎಸ್ ಎಲ್ ವರದಿಗಳು ಪೊಲೀಸರ ಕೈ ಸೇರಿದ್ದು, ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸಿಸಿಟಿವಿ, ಬ್ಲಡ್ ರಿಪೋರ್ಟ್ ಕುರಿತ ಎಫ್ ಎಸ್ ಎಲ್ ನ ಆರು ವರದಿಗಳು ಪೊಲೀಸರಿಗೆ ಇ-ಮೇಲ್ ಮೂಲಕ ಬಂದಿದ್ದು, ಹತ್ಯೆ ಪ್ರಕರಣದಲ್ಲಿ ಮತ್ತಷ್ಟು ಸಾಕ್ಷಿಗಳು ಲಭ್ಯವಾಗಿವೆ ಎನ್ನಲಾಗಿದೆ.
ಇಂದು ಎಫ್ ಎಸ್ ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಕಮಿಷನರ್ ದಯಾನಂದ್ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖಾಧಿಕಾರಿಗಳು, ಹಿರಿಯ ಅಧಿಕಾರಿಗಳ ಜೊತೆಗೆ ಎಫ್ ಎಸ್ ಎಲ್ ವರದಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಕಾನೂನಿನ ಮೊರೆ ಹೋಗಲು ಪೊಲೀಸರು ನಿರ್ಧರಿಸಿದ್ದಾರೆ.