ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಡಿಯೋಕಾನ್ ಫೈರೆನ್ಸ್ ಮೂಲಕ ವಿಚಾರಣೆ ನಡೆಯಿಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ ಜುಲೈ 18 ವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸರಿಸಿ ಆದೇಶ ಹೊರಡಿಸಿತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಒಬ್ಬನಿಗೆ ಹಣದ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಪವಿತ್ರ ಗೌಡ ಸ್ನೇಹಿತೆ ಸಮತಾ ಸೇರಿದಂತೆ ಮೂವರಿಗೆ ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೇ ಸಂಬಂಧಸಿದಂತೆ ಪವಿತ್ರ ಸ್ನೇಹಿತೆ ಸಮತಾಗು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿ ಒಬ್ಬನಿಗೆ ಹಣದ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಪವಿತ್ರ ಗೌಡ ಸ್ನೇಹಿತೆ ಸಮತಾಗು ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ಇನ್ನೊಂದು ಕಡೆ ಪ್ರಭಾವಿ ಶಾಸಕರ ಕಾರು ಚಾಲಕನಿಗೂ ಕೂಡ ಪೊಲೀಸರು ಇದೀಗ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ಜಾರಿ ಮಾಡಿದಾರೆ. ಬೆಂಗಳೂರು ಪ್ರಭಾವಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ ಎನ್ನುವವನೀಗೆ ನೋಟಿಸ್ ನೀಡಲಾಗಿದೆ.ನೋಟಿಸ್ ತಲುಪಿದ ಮೇಲೆ ಕಾರ್ತಿಕ ಪರಾರಿಯಾಗಿದ್ದನೇ ಆರೋಪಿ ಪ್ರದೋಷಗು ಕೂಡ ಕಾರ್ತಿಕ್ ಆಪ್ತನಾಗಿದ್ದ ಎನ್ನಲಾಗುತ್ತಿದೆ.
ಮಾಜಿ ಉಪಮೇಯರ್ ಮೋಹನ್ ರಾಜ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಮೋಹನ್ ರಾಜ್ಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದಾರೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ ದರ್ಶನ್ಗೆ 40 ಲಕ್ಷ ಹಣ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.