ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ತಮ್ಮ ಜಾಮೀನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದ ಆದೇಶವನ್ನು ರದ್ದುಗೊಳಿಸುವ ಮೂಲಕ ಆಗಸ್ಟ್ 14 ರಂದು ಪವಿತ್ರಾ ಗೌಡ, ದರ್ಶನ್ ತೂಗುದೀಪ ಮತ್ತು ಇತರ ಐವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಮೀನು ರದ್ದು ಮಾಡಿತ್ತು. ಇದೀಗ ಮರು ಪರಿಶೀಲನೆ ಕೋರಿ ಪವಿತ್ರ ಗೌಡ ಮತ್ತೊಂದು ಅರ್ಜಿ ಸಲ್ಲಿಸಿದ್ದು ಜಾಮೀನು ಮಂಜೂರು ಮಾಡುವಂತೆ ಕೋರಿ ಪವಿತ್ರ ಗೌಡ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 6 ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇನ್ನು ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಪುನರ್ ಪರಿಶೀಲನ ಅರ್ಜಿ ಪ್ರತಿಯನ್ನು ನಮಗೆ ನೀಡಿಲ್ಲ ಎಂದು ದೆಹಲಿಯಲ್ಲಿ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ.
Pavithra Gowda, one of the accused in the Renuka Swamy murder case has filed a plea in the Supreme Court seeking review of its decision to cancel her bail.
The Supreme Court had on August 14 cancelled the bail of Pavithra Gowda, Darshan Thoogudeepa and five others by setting…
— ANI (@ANI) November 4, 2025
		






