ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ನಟ ದರ್ಶನ್, ಪವಿತ್ರಾಗೌಡ ಹೊರತುಪಡಿಸಿ ಉಳಿದ ಆರೋಪಿಗಳನ್ನು ಸ್ಥಳ ಮಹಜರಿಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ.
ಇಂದು ದರ್ಶನ್ ಮತ್ತು ಸಹಚರರ ವಿಚಾರಣೆ ನಡೆಸಲಿದ್ದು, ಕೃತ್ಯ ನಡೆದ ಸ್ಥಳಗಳಲ್ಲಿ ಮಹಜರು ನಡೆಸಲಾಗುತ್ತಿದೆ. ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಸದ್ಯಕ್ಕೆ ಇಲ್ಲಿ ಸ್ಥಳ ಮಹಜರು ನಡೆಸಲಾಗುತ್ತಿದೆ. ಬಳಿಕ ಕೊಲೆಯಾದ ಸ್ಥಳ, ಮೃತದೇಹ ಎಸೆದ ಸ್ಥಳಗಳಲ್ಲಿ ಪೊಲೀಸರು ಆರೋಪಿಗಳೊಂದಿಗೆ ಸ್ಥಳ ಮಹಜರು ನಡೆಸಲಿದ್ದಾರೆ.