ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಜಲ್ಲಿ ಸೇರಿದ್ದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಹೌದು ಪ್ರಕರಣದ ಎ-15, ಎ-17 ಆರೋಪಿಗಳಾದ ಕಾರ್ತಿಕ್, ನಿಖಿಲ್ ನಾಯ್ಕ್ ಗೆ 57 ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಿದೆ. ಇನ್ನೂ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆಯಾದ ಸಂದರ್ಭದಲ್ಲಿ ಸಾಕ್ಷಿ ನಾಶ ಪಡಿಸಲು ಈ ಮೂವರು ಯತ್ನಿಸಿದ್ದರು ಎಂದು ಪೊಲೀಸರು ಕೋರ್ಟಿಗೆ ಸಲ್ಲಿಸಿದ ಚರ್ಚಿನಲ್ಲಿ ಉಲ್ಲೇಖಿಸಿದ್ದರು. ಹಾಗಾಗಿ ಇದೀಗ ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ.
ಇನ್ನೊಂದು ಕಡೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು.ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಪವಿತ್ರಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಸೆಪ್ಟೆಂಬರ್ 25ಕ್ಕೆ ಮಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.