ಚಿತ್ರದುರ್ಗ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿತ್ರದುರ್ಗದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಎ6 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಹಾಗೂ ಎ7 ಆರೋಪಿ ಅನಿ ಅಲಿಯಾಸ್ ಅನಿಲ್ ಆರೋಪಿಗಳನ್ನು ಚಿತ್ರದುರ್ಗ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿತ್ರದುರ್ಗ ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎ6 ಆರೋಪಿ ಜಗ್ಗಿ ಅಲಿಯಾಸ್ ಜಗದೀಶ್ ಹಾಗೂ ಎ 7 ಆರೋಪಿ ಅನಿ ಅಲಿಯಾಸ್ ಅನಿಲ್ ಎನ್ನುವವರು ತಲೆಮರಿಸಿಕೊಂಡಿದ್ದರು. ಇದೀಗ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಜಂಟಿ ಕಾರ್ಯಚರಣೆಯಲ್ಲಿ ಜಗದೀಶ್ ಅನಿಲನ್ನು ಬಂಧಿಸಿ ಇದೀಗ ಬೆಂಗಳೂರಿಗೆ ಕರೆತರುತ್ತಿದ್ದಾರೆ.