ಬೆಂಗಳೂರು : ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಇಂದು 77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಂಜಿ ರಸ್ತೆಯ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ ರಾಜ್ಯಪಾಲರು 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಗೌರವ ರಕ್ಷೆ ಸ್ವೀಕರಿಸಿದ್ದಾರೆ. ನಂತರ ನಾಡಿನ ಜನತೆಗೆ ರಾಜ್ಯಪಾಲರು ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.
ಪಥ ಸಂಚಲನದಲ್ಲಿ ಪೊಲೀಸರು, ಸ್ಕೌಟ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.








