ಮೈಸೂರು : ನಿನ್ನೆಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ವಾಗಿ ಬದಲಾವಣೆ ಆಗಿದೆ. ಇದೆ ವಿಚಾರವಾಗಿ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಮೀಸಲಾತಿ ಪ್ರಕಟಿಸಿ, ವಿಭಾಗಗಳನ್ನು ವಿಂಗಡಿಸಿ ಆದಷ್ಟು ಬೇಗ ಚುನಾವಣೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ 4 ತಿಂಗಳಲ್ಲಿ ತಡಮಾಡದೇ, ಬೇಗ ಚುನಾವಣೆ ಮಾಡಲಾಗುವುದು. ಇದರ ಸಂಬಂಧ ಎಲ್ಲಾ ಪಕ್ಷಗಳ ಮುಖಂಡರ ಸಭೆ ಕರೆಯಲಾಗುವುದು. ಗ್ರೇಟರ್ ಬೆಂಗಳೂರು ರಚನೆಗೆ ಎಲ್ಲಾ ಪಕ್ಷದವರು ಸಲಹೆ, ಸೂಚನೆ ನೀಡಿದ್ದಾರೆ. ಎಲ್ಲರ ಸಲಹೆಗಳನ್ನು ಪಡೆದು ಗ್ರೇಟರ್ ಬೆಂಗಳೂರು ರಚನೆ ಮಾಡಲಾಗಿದೆ ಎಂದು ತಿಳಿಸಿದರು.