ಮೈಸೂರು : ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿರುವ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಬೋಗಾದಿಯ ನಿವಾಸಿ ಲವಕುಶ (60) ಮೃತ ನಿವೃತ್ತ ಎಎಸ್‌ಐ.
ಕೆ.ಆರ್. ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲವಕುಶ ಅವರು ಮೂರು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಭಾನುವಾರ ಬೆಳಗ್ಗೆ ಮನೆಯಿಂದ ಹೊರ ಬಂದವರು ಕುಕ್ಕರಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








