ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಾಣಿ ಶಿವರಾಮ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.
ಇತ್ತೀಚಿಗೆ ನಿಧನರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆಸೆಯಂತೆ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು. ಕಾಂಗ್ರೆಸ್ ಸೇರುವ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಲಿದ್ದಾರೆ.