ಬೆಂಗಳೂರು : ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಐಜಿಪಿ ಓಂ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಹೆಚ್.ಎಸ್.ಆರ್.ಲೇಔಟ್ ನ ಟೆನ್ನಿಸ್ ಕೋರ್ಟ್ ನಲ್ಲಿ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಹೆಚ್.ಎಸ್.ಆರ್.ಲೇಔಟ್ ಗೆ ತರಲಾಗುತ್ತಿದೆ.
ಹೆಚ್.ಎಸ್.ಆರ್.ಲೇಔಟ್ ನ ಟೆನ್ನಿಸ್ ಕೋರ್ಟ್ ನಲ್ಲಿ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಸಿಹೆಚ್ ಎಸ್ ಕ್ಲಬ್ ನಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಮಾಧ್ಯಾಹ್ನ 3 ಗಂಟೆಗೆ ವಿಲ್ಸನ್ ಗಾರ್ಡನ್ ನಲ್ಲಿ ಎಲೆಕ್ಟ್ರಿಕ್ ಕ್ರಿಮಿಟೋರಿಯಂ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.