ಕಲಬುರ್ಗಿ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿ ವಿಚಾರಣೆಗೆ A1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದೆ ಹೋದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಕಲ್ಬುರ್ಗಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಎಚ್ ಡಿ ರೇವಣ್ಣ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುತ್ತದೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಜ್ವಲ್ ಪ್ರಕರಣ ಸಂಬಂಧ ನೀಡಿದ್ದೇವೆ. ವಿಮಾನ ನಿಲ್ದಾಣ ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಇದರಲ್ಲಿ ಯಾರನ್ನು ರಕ್ಷಣೆ ಮಾಡುವುದಿಲ್ಲ. ಶೀಘ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.
ಎಲ್ಲಾ ಏರ್ಪೋರ್ಟ್ ಗಳಿಗೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ. ಪ್ರಕರಣ ಕುರಿದಂತೆ ಎಸ್ ಐ ಟಿ ರಚಿಸಿದ್ದೇವೆ ಆದರೆ ಎಸ್ ಐ ಟಿ ನೋಟಿಸ್ ಗೆ 48 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಬೇಕು. ಹಾಗಾಗಿ ಇಂದು ಎಚ್ಡಿ ರೇವಣ್ಣ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಒಂದು ವೇಳೆ ಹಾಜರಾಗದೆ ಹೋದರೆ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.