ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಇದೀಗ ಶಾಸಕ ಭೈರತಿ ಬಸವರಾಜ್ ಪಿಎ ಹನುಮಂತನಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ.
ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರು ಬಿಜೆಪಿ ಶಾಸಕ ಭೈರತಿ ಬಸವರಾಜ್ ಪಿಎ ಹನುಮಂತನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಆರೋಪಿಗಳ ಜೊತೆಗೆ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ.
ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಬಳಿಕ ಪೊಲೀಸರು ಈವರೆಗೆ ಒಟ್ಟು 16 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.