ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ರದ್ದು ಕೋರಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ರದ್ದು ಕೋರಿ ಶಾಸಕ ಭೈರತಿ ಬಸವರಾಜ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕದಸದಸ್ಯಪೀಠದಲ್ಲಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಭೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ ಚೌಟ ಮನವಿ ಮಾಡಿದ್ದಾರೆ. ಭೈರತಿ ಪರ ವಕೀಲರ ಮನವಿಗೆ ಎಸ್ ಪಿಪಿ ಬಿ.ಎ. ಬೆಳ್ಳಿಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಬೆಂಗಳೂರಿನ ಹಲಸೂರು ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.