ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ಮೆರೆದಿದ್ದು, ಜನರಿಗೆ ಲಾಂಗು, ಮಚ್ಚ ತೋರಿಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ 10 ಕ್ಕೂ ಹೆಚ್ಚು ರೌಡಿಗಳ ಗ್ಯಾಂಗ್ ಜನರಿಗೆ ಲಾಂಗು, ಮಚ್ಚು ತೋರಿಸಿ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಲಾಂಗು, ಮಚ್ಚು ಹಿಡಿದು ಏರಿಯಾಗಳಲ್ಲಿ ಪುಡಾರಿಗಳು ಅಟ್ಟಹಾಸ ಮೆರೆದಿದ್ದಾರೆ.
ಸದ್ಯ ಪುಡಾರಿ ಗ್ಯಾಂಗ್ ನ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪುಡಿ ರೌಡಿಗಳನ್ನು ಹೆಡೆಮುರಿಕಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.