ವಿಜಯಪುರ; ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ರಜೀವುಲ್ಲಾಮಕಾನದಾರ್, ವಸೀಂ ಮಣಿಯಾರ್, ಫಿರೋಜ್ ಅವರಾದ್, ಮೌಲಾಲಿ ಲಾಡೇಸಾಬ್ ಜೋರಗಿ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.