ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ 5 ದಿನಗಳ ಕಾಲ ಅಂದರೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ACJM ಕೋರ್ಟ್ ಆದೇಶ ಹೊರಡಿಸಿದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇತ್ತೀಚಿಗೆ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದರು. ಬಳಿಕ ಅವರಾಗಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಬಳಿಕ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಬೈರತಿ ಬಸವರಾಜ್ ಅವರನ್ನು ಕೋರ್ಟಿಗೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಭೈರತಿ ಬಸವರಾಜ್ ಗೆ ಫೆಬ್ರವರಿ 26 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.








