ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೌದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಡೆಡ್ಲಿ ಕಿರಣ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ತಲೆಮರೆಸಿಕೊಂಡಿದ್ದಾನೆ.