ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದ್ದು ಸಿಐಡಿ ಅಧಿಕಾರಿಗಳು ಇದೀಗ ಬೈರತಿ ಬಸವರಾಜ್ ಅವರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಈ ಒಂದು ಪ್ರಕರಣದಲ್ಲಿ ಭೈರತಿ ಬಸವರಾಜ ಪತ್ತೆಗಾಗಿ ಅಧಿಕಾರಿಗಳು ಮೂರು ತಂಡಗಳನ್ನು ರಚಿಸಿದ್ದಾರೆ. ಗೋವಾ ಮಹಾರಾಷ್ಟ್ರದಲ್ಲಿ ಎರಡು ತಂಡಗಳಿಂದ ಈಗಾಗಲೇ ಹುಡುಕಾಟ ನಡೆಸಲಾಗುತ್ತಿದ್ದು ಇನ್ನೂ ನಿನ್ನೆ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಭೈರತಿ ಬಸವರಾಜ್ ಯಾವ ರಸ್ತೆಯ ಮೂಲಕ ತೆರಳಿದ್ದಾರೆ ಎನ್ನುವುದರ ಕುರಿತು ಸಿಐಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಇನ್ನು ಬಂಧನದ ಭೀತಿಯಿಂದ ಭೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಬಸವರಾಜ್ ಜೊತೆಗೆ ಫೋನ್ ಸಂಪರ್ಕದಲ್ಲಿರುವವರ ಬಗ್ಗೆ ಕೂಡ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಳಗಾವಿಯಿಂದ ಎಲ್ಲಿಗೆ ಹೋಗಿದ್ದಾರೆ ಎನ್ನುವ ಮಾಹಿತಿ ಹಾಗೂ ಟೋಲ್ ಗಳ ಬಳಿಯ ಸಿಸಿ ಕ್ಯಾಮೆರಾ ಗಳನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಬೆಳಗಾವಿಯಿಂದ ಹೊರ ಹೋಗುವ ಟೋಲ್ ಗಳ ಸಿಸಿ ಕ್ಯಾಮರಾ ಪರಿಶೀಲನೆ ಮಾಡಲಾಗುತ್ತಿದೆ.








