ಬೆಂಗಳೂರು : ಇತ್ತೀಚಿಗೆ ಬೆಂಗಳೂರು ನಗರದಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಪೊಲೀಸ್ ಇಲಾಖೆ ನೋಡಿಯು ನೋಡದಂತೆ ಕಣ್ಣು ಮುಚ್ಚಿ ಕುಳಿತಿದೆ. ಇದೀಗ ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದು, ಮಾರಾಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಗೈಯಲಾಗಿದೆ.
ಹೌದು ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳಿಂದ ರಾಜೇಶ್ ಎನ್ನುವ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಹನುಮಂತನಗರದ ಕಗ್ಗೀಸ ಬೇಕರಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.