ರಾಮನಗರ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಘಟನೆ ಮಾಸುವ ಮುನ್ನವೇ ರಾಮನಗರದಲ್ಲಿ ಮತ್ತೊರ್ವ ರೌಡಿಶೀಟರ್ ನ ಕೊಲೆಯಾಗಿದ್ದು ಕಾರಿನಲ್ಲಿ ಹಿಂಬದಿಯಿಂದ ಬಂದು ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಹೌದು ಹಳೆ ವೈಷಮ್ಯಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ರೌಡಿಶೀಟರ್ ಸಂತೋಷ (33) ಅಲಿಯಾಸ್ ಕರಡಿ ಎನ್ನುವ ವ್ಯಕ್ತಿಯ ಹತ್ಯೆಯಾಗಿದೆ. ಹತ್ಯೆಯಾದ ಸಂತೋಷ ಬೆಂಗಳೂರಿನ ಕೋಣನಕುಂಟೆ ನಿವಾಸಿ ಎಂದು ತಿಳಿದು ಬಂದಿದೆ.
ಸಂತೋಷ್ ಎಂದಿನಂತೆ ಬೈಕ್ ನಲ್ಲಿ ತೆರುಳುತ್ತಿದ್ದಾಗ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬದಿಯಿಂದ ಬಂದು ಗುದ್ದಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಆತನ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.