ಬೆಂಗಳೂರು : ಬೆಂಗಳೂರು ನಗರದಲ್ಲಿ ವೀಲ್ಹಿಂಗ್ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ವ್ಹೀಲಿಂಗ್ ಮಾಡಿದ್ದ 14 ಜನರ ವಿರುದ್ಧ ರೌಡಿಶೀಟರ್ ಓಪನ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡಿದ್ದ 14 ಮಂದಿ ಪುಂಡರ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲಿಸರು ರೌಡಿಶೀಟರ್ ಓಪನ್ ಮಾಡಿದ್ದಾರೆ. ಮಾರಕಾಸ್ತ್ರಗಳನ್ನು ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಗುಂಪನ್ನು ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.
ಫೆ.13ರದು ಶಬ್ ಎ ಬಾರತ್ ಹಬ್ಬ ದ ಹಿನೆಲೆಯಲ್ಲಿ 25ಕ್ಕೂ ಹೆಚ್ಚು ಜನರು ಕೆ.ಜಿ.ಹಳ್ಳಿಯ ನೂರ್ ಮಸೀದಿ ಬಳಿ ರೀಲ್ಸ್ ಹುಚ್ಚಾಟಕ್ಕಾಗಿ ಬೈಕ್ ಗಳಲ್ಲಿ ತ್ರಿಬಲ್ ರೈಡ್ ನಲ್ಲಿಯೇ ಮಾರಕಾಸ್ತ್ರ್ಗಗಳನ್ನು ಹಿಡಿದು ವ್ಹೀಲಿಂಗ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಪುಂಡರ ವ್ಹೀಲಿಂಗ್ ಹುಚ್ಚಾಟದ ವಿಡಿಯೋ ವೈರಲ್ ಆಗಿತ್ತು. ಬಳಿಕ ಪೊಲೀಸರು 14 ಮಂದಿಯನ್ನು ಬಂಧಿಸಿದ್ದು, ಇದೀಗ ರೌಡಿಶೀಟರ್ ಓಪನ್ ಮಾಡಿ ಹೆಡೆಮುರಿ ಕಟ್ಟಿದೆ.