ಬೆಂಗಳೂರು : ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ.
ಹೌದು ಮಾಯಸಂದ್ರದ ಬಳಿ ರೌಡಿಶೀಟರ್ ಕಾಲಿಗೆ ಪೊಲೀಸರಿಂದ ಫೈರಿಂಗ್ ನಡೆದಿದೆ. ರೌಡಿಶೀಟರ್ ಮನೋಜ್ ಮೇಲೆ ಲೋಕಿ ಗ್ಯಾಂಗ್ ದಾಳಿ ಮಾಡಿತ್ತು. ಘಟನೆ ಬಳಿಕ ಲೋಕಿ ಮತ್ತು ಆತನ ಗ್ಯಾಂಗ್ ತಲೆಮೆರೆಸಿಕೊಂಡಿತ್ತು.ಇಂದು ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೇನೆ ಲೋಕಿ ಹಲ್ಲೆಗೆ ಯತ್ನಿಸಿದ್ದಾನೆ.
ಪೊಲೀಸರ ಮೇಲೆ ಹಲ್ಲೆ ಮಾಡಿ ಲೋಕೇಶ್ ಯತ್ನಿಸಿ ಪರಾರಿಯಾಗುವ ವೇಳೆ ಆತ್ಮ ರಕ್ಷಣೆಗಾಗಿ ಜಿಗಣಿ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ರೌಡಿ ಶೀಟರ್ ಲೋಕಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.