ಬೆಳಗಾವಿ : ಬೆಳಗಾವಿಯಲ್ಲಿ ಅಪರಿಚಿತರಿಂದ ರೌಡಿಶೀಟರ್ ಮೇಲೆ ಫೈರಿಂಗ್ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರೌಡಿ ಶೀಟರ್ ಪ್ರಫುಲ್ ಪಾಟೀಲ್ ಹತ್ಯೆಗೆ ಯತ್ನಿಸಲಾಗಿದೆ. ಬೆಳಗಾವಿ ತಾಲೂಕಿನ ಗಣೇಶಪುರದ ಹೊರವಲಯದಲ್ಲಿ ಈ ಒಂದು ಘಟನೆ ನಡೆದಿದೆ.
ಬೆಳಗುಂದಿ ಗ್ರಾಮದಿಂದ ಮನೆಗೆ ಹೋಗುವಾಗ ಪ್ರಫುಲ್ ಪಾಟೀಲ್ ಮೇಲೆ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಚಲಿಸುವ ಕಾರಿನ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಆದರೆ ಗುಂಡುಗಳು ಕಾರಿನ ಗ್ಲಾಸ್ ಗೆ ತಗುಲಿದ್ದರಿಂದ ಪ್ರಫುಲ್ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ..
ಕಾರಿನ ಗಾಜುಗಳು ಮುಖ ಹಾಗೂ ತಲೆಬಾಗಕ್ಕೆ ಸಿಡಿದ ಪರಿಣಾಮ ಪ್ರಫುಲ್ಲ್ ಪಾಟೀಲ್ ಗೆ ಗಂಭೀರವಾದ ಗಾಯಗಳಾಗಿವೆ. ರೌಡಿಶೀಟರ್ ಪ್ರಫುಲ್ ಪಾಟೀಲ್ ಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆ ಕುರಿತು ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.